ಮಂಗಳೂರು : ಅಕ್ರಮವಾಗಿ ವಿದೇಶದಿಂದ ಖೀರ್ ಮಿಕ್ಸ್ ಪಾಕೆಟ್ ಗಳಲ್ಲಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರು ‘ಖೀರ್ ಮಿಕ್ಸ್’ ಪೊಟ್ಟಣಗಳಲ್ಲಿ ಕಳ್ಳಸಾಗಣೆ ಮಾಡಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್‌ನ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಟ್ವೀಟ್ ಮಾಡಿದೆ. ಸಂದೇಹ ಬಂದಿದ್ದರಿಂದ ಖೀರ್ ಮಿಕ್ಸ್ ಪಾಕೆಟ್ ಗಳನ್ನು ತಪಾಸಣೆ ಮಾಡಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಮೂಲಗಳು ತಿಳಿಸಿವೆ.