ಪಟಾಕಿಗೆ ನಿಷೇಧ – ಹಸಿರು ಪಟಾಕಿಗೆ ಅನುಮತಿ – ಪ್ರತಿವರ್ಷ ಪರವಾನಗಿ ನವೀಕರಣ – ಸಿಎಂ ಸೂಚನೆ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದ್ದು, ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅನುಮತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ನಡೆದ ಸಭೆಯ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಮಾಲಿನ್ಯವನ್ನುಂಟು ಮಾಡುವ ಪಟಾಕಿ ಸಿಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಸಮೀಪಿಸುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದರು. ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶ ನೀಡಲಾಗಿತ್ತು. ಇನ್ನು ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

 

LEAVE A REPLY

Please enter your comment!
Please enter your name here