ಭಾರತ-ಅಫ್ಘಾನ್ ಪಂದ್ಯದ ವೇಳೆ ಅಭಿಮಾನಿಗಳ ಹೊಡೆದಾಟ – ವಿಡಿಯೋ ವೈರಲ್

ಮಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ವಿಶ್ವಕಪ್ ಕದನದಲ್ಲಿ ಅಫ್ಘಾನಿಸ್ತಾನ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಟೀಂ ಇಂಡಿಯಾ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಆದರೆ ಇದೇ ಪಂದ್ಯದಲ್ಲಿ ನಡೆದ ಅಭಿಮಾನಿಗಳ ನಡುವಿನ ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲವರು ಇದು ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಮಾನಿಗಳ ನಡುವಿನ ಕದನ ಎಂದು ಬಿಂಬಿಸುವ ಮೂಲಕ ಈ ಜಗಳವನ್ನು ಮತ್ತಷ್ಟು ಸುದ್ದಿಯಾಗಿಸಿದ್ದಾರೆ. ಕೊಹ್ಲಿ ಮತ್ತು ಗಂಭೀರ್ ಅಭಿಮಾನಿಗಳ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳು ಪರಸ್ಪರ ನಿಂದಿಸಿದ್ದು, ಅವರ ನಡುವೆ ಮಾತಿನ ಚಕಮಕಿಯೂ ನಡೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಆದರೆ, ಯಾವ ಕಾರಣದಿಂದ ಜಗಳ ಆರಂಭವಾಯಿತು ಎಂಬುದು ಸ್ಪಷ್ಟವಾಗಿಲ್ಲ. ಕೆಲವರ ಪ್ರಕಾರ ಇದು ಕೊಹ್ಲಿ ಹಾಗೂ ಗಂಭೀರ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವಲ್ಲ. ಗಂಭೀರ್ ಹಾಗೂ ಕೊಹ್ಲಿ ನಡುವೆ ಇನ್ನಷ್ಟು ಕಂದಕವನ್ನು ಉಂಟು ಮಾಡುವ ಸಲುವಾಗಿ ಈ ರೀತಿಯ ಅಸ್ತ್ರ ಬಳಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here