ಮಂಗಳೂರು ವಿಮಾನ ನಿಲ್ದಾಣದಲ್ಲಿ 61.42 ಲಕ್ಷ ರೂ. ಮೌಲ್ಯದ ಚಿನ್ನ ವಶ – ದುಬೈಯಿಂದ ಬಂದ ಪ್ರಯಾಣಿಕನ ಬಂಧನ

ಮಂಗಳೂರು: ದುಬೈಯಿಂದ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಪ್ರಯಾಣಿಕನೋರ್ವನನ್ನು ಅ.11 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುದದ್ವಾರದಲ್ಲಿ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿರುವುದು ತಪಾಸಣೆ ವೇಳೆ ತಿಳಿದುಬಂದಿದೆ.

LEAVE A REPLY

Please enter your comment!
Please enter your name here