ಮಂಗಳೂರು: ಐಕಳ ಹರೀಶ್ ಶೆಟ್ಟಿ ಬಂಟ ಸಮಾಜದ ಒಬ್ಬ ನಾಯಕ. ಅವರಲ್ಲಿನ ಸಂಘಟನಾ ಶಕ್ತಿ ಇತರರಿಗೆ ಮಾದರಿ. ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದೇವೆ. ಇದು ಬಂಟ ಸಮಾಜದ ಮನೆಮನೆಗೆ ತಲುಪಲಿ ಆ ಮೂಲಕ ಒಂದೇ ವೇದಿಕೆಯಡಿಯಲ್ಲಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಿ ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನ ಆಗಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಅ. 28, 29 ರಂದು ಉಡುಪಿಯಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನ-2023 ರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲಕ ಸಮಾಜದ ಜನರ ಹಿತದೃಷ್ಟಿಗಾಗಿ ಸಂಘಟನೆ ಮೂಲಕ ಹತ್ತಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದೇವೆ. ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತರುವ ಉದ್ದೇಶದಿಂದ ವಿಶ್ವ ಬಂಟರ ಸಮ್ಮೇಳನ ಆಯೋ ಜನೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಎರಡು ದಿನಗಳ ಕಾಲ ಕಾರ್ಯಕ್ರಮದ ಯಶಸ್ಸಿಗಾಗಿ ಕೆಲಸ ಮಾಡಬೇಕು ಎಂದರು.
ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಮಾಜಿ ಸಚಿವ ಬಿ. ರಮಾನಾಥ್ ರೈ, ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿ ಎಲ್ಲರ ಸಹಕಾರ ಕೋರಿದರು. ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜಾ, ಎ.ಜಗನ್ನಾಥ ಚೌಟ, ಲೋಕೇಶ್ ಶೆಟ್ಟಿ ಕೊಳ, ಸುರೇಶ್ ರೈ ಮಕರಜ್ಯೋತಿ, ನಿತೇಶ್ ಶೆಟ್ಟಿ ಎಕ್ಕಾರ್, ಪ್ರಖ್ಯಾತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.