ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ

ಮಂಗಳೂರು(ಮೈಸೂರು): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದರು.

ಬರದ ಕರಿನೆರಳಿನಲ್ಲಿ ಅತ್ತ ಸರಳವೂ ಅಲ್ಲದ ಇತ್ತ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ಸಭಾ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಉಪಸ್ಥಿತಿಯಲ್ಲಿ 10.15 ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ವಿಶೇಷ ಪೂಜೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ನಂದಿಧ್ವಜ ಕುಣಿತದ, ನಾದಸ್ವರದ ಮೂಲಕ ಉದ್ಘಾಟಕರು ಮತ್ತು ಗಣ್ಯರನ್ನು ಸ್ವಾಗತಿಸಲಾಯಿತು. ಬೆಳ್ಳಿ ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಮಳೆ ಬೆಳೆಯಾಗಿ ಸಮೃದ್ಧಿಗೊಳ್ಳಲಿ ಎಂದು ಹರಸಿದರು. ದಸರಾ ಯದ್ಘಾಟನೆಯನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here