ಮಂಗಳೂರು/ಪುತ್ತೂರು: ಅ.23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಡೆದ ಪಿಕ್ ಅಪ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.168/2023 ರಂತೆ ಕಳವು ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಝತ್, ತಬ್ರೀಜ್, ಮೊಹಮ್ಮದ್ ಹುಸೈನ್, ಹಾರೀಸ್ ಮತ್ತು ಮಹಮ್ಮದ್ ಅಯೂಬ್ ಖಾನ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.