ಮಂಗಳೂರು : ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ಅ.16 ರಂದು ಅಪರಾಹ್ನ 2.00 ಗಂಟೆಗೆ ದಸರಾ ಬಹುಭಾಷಾ ಕವಿಗೋಷ್ಠಿ ಮಂಗಳೂರು ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಲಿದೆ.
ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಉದ್ಘಾಟಿಸಲಿದ್ದು, ಕವಿಗೋಷ್ಠಿಯ ಅಧ್ಯಕ್ಷತೆಯನ್ನು ನಿವೃತ್ತ ಉಪನ್ಯಾಸಕಿ ಹಾಗೂ ಲೇಖಕಿ ಡಾ.ಮೀನಾಕ್ಷಿ ರಾಮಚಂದ್ರ ವಹಿಸಲಿದ್ದಾರೆ. ಬಹುಭಾಷಾ ಕವಿಗೋಷ್ಠಿಯಲ್ಲಿ ತುಳುನಾಡಿನ ಹನ್ನೆರಡು ಭಾಷೆಗಳಲ್ಲಿ ಕವಿತಾ ವಾಚನ ನಡೆಯಲಿದೆ. ತುಳು, ಕನ್ನಡ, ಬ್ಯಾರಿ, ಅರೆಭಾಷೆ, ಕುಂದ ಕನ್ನಡ, ಹವ್ಯಕ ಕನ್ನಡ, ಶಿವಳ್ಳಿ ತುಳು, ಸ್ಥಾನಿಕ ತುಳು, ಕೊರಗ ಭಾಷೆ, ಜಿ.ಎಸ್. ಬಿ ಕೊಂಕಣಿ, ಕ್ರೈಸ್ತ ಕೊಂಕಣಿ, ಮಲಯಾಳಂ ಭಾಷೆಗಳ ಕವಿಗಳು ಕವಿತೆ ವಾಚಿಸಲಿದ್ದಾರೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕವಿಗಳು ಈ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.