ಮಂಗಳೂರು(ಚಾಹಕ್): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಇಂದು (ಅ.15) ಬೆಳಿಗ್ಗೆ ಹಲವು ಭಾರಿ ಭೂಮಿ ಕಂಪಿಸಿದ್ದು, ಒಬ್ಬರು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೆರಾತ್ ಗವರ್ನರ್ ಕಚೇರಿ ತಿಳಿಸಿದೆ.
ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.5ರಷ್ಟು ದಾಖಲಾಗಿದ್ದು, ಹೆರಾತ್ ಪಟ್ಟಣದ ಹೊರವಲಯದಲ್ಲಿ ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಅಫ್ಗಾನಿಸ್ತಾನದಲ್ಲಿ ಈಚೆಗೆ ಸಂಭವಿಸಿದ ಸರಣಿ ಭೂಕಂಪಗಳಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.