ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾದ ಹಿನ್ನಲೆಯಲ್ಲಿ ನಗರದ ಶ್ರೀಕ್ಷೇತ್ರ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ಅ.15ರಂದು ನೆರವೇರಿತು.
ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು. ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ಗಮನ ಸೆಳೆಯುತ್ತಿದ್ದು, ಶಿಲಾಬಾಲಿಕೆಯರ, ವಿವಿಧ ದೇವರುಗಳ ಕಲಾಕೃತಿಗಳನ್ನು ದರ್ಬಾರ್ ಮಂಟಪದ ಕಂಬಗಳಲ್ಲಿ ಚಿತ್ರಿಸಲಾಗಿದೆ. ಮಂಟಪದ ಮೇಲ್ಗಡೆ ಸ್ವಯಂಚಾಲಿತವಾಗಿ ತಿರುಗುವ ಮೇಲ್ಛಾವಣಿಯನ್ನು ಅತ್ಯಾಕರ್ಷಕವಾಗಿ ರಚಿಸಲಾಗಿದ್ದು, ಮುಲ್ಕಿಯ ಚಂದ್ರಶೇಖರ ಸುವರ್ಣ ಅವರ ತಂಡ ಈ ದಸರಾ ಮಂಟಪವನ್ನು ಸುಂದರವಾಗಿ ನಿರ್ಮಿಸಿದೆ. ನಮ್ಮ ಓದುಗರಿಗಾಗಿ ಮಂಗಳೂರು ದಸರಾದ ಉದ್ಘಾಟನಾ ಸಮಾರಂಭದ ಝಲಕ್ ಇಲ್ಲಿದೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ