ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬಿಟ್ಟು ಕಂದಕಕ್ಕೆ ಬಿದ್ದ ಘಟನೆ ಗುರುಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬಂಟ್ವಾಳ ನಿವಾಸಿ ಪಿ ಎಸ್ ಮಹಮ್ಮದ್ ಎಂದು ಗುರುತಿಸಲಾಗಿದ್ದು, ಪೊಲೀಸರು 3000 ರೂ. ದಂಡ ವಿಧಿಸಿದ್ದಾರೆ.
ಕಾರು ಚಾಲಕ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಗುರುಪುರದ ರಾಷ್ಟ್ರೀಯ ಹೆದ್ದಾರಿ ಸಮೀಪಿಸುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಬಜಪೆ ಠಾಣಾ ಪೊಲೀಸರು ಕಾರು ಚಾಲಕನ ವಿರುದ್ಧ ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯ ಪ್ರಕರಣ ದಾಖಲಿಸಿ 3000 ರೂ. ದಂಡ ವಿಧಿಸಿದ್ದಾರೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ