ಮಂಗಳೂರು (ಮೈಸೂರು): ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಮುನ್ನೆಲೆಗೆ ಬಂದಿದ್ದು, ಕರಂದ್ಲಾಜೆ ರಾಜ್ಯಾಧ್ಯಕ್ಷೆಯಾಗಲಿದ್ದಾರೆ ಎಂದು ಹರಿದಾಡುತ್ತಿರುವ ಸುದ್ದಿ ಕುರಿತು ಅವರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನ ಅರಮನೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆʼʼ ಎಂದು ಸ್ಪಷ್ಟಪಡಿಸಿದ್ದಾರೆ.
ʼʼನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.