ಭೂಗತ ಪಾತಕಿ ರವಿ ಪೂಜಾರಿ ಸಹಚರ ಹನೀಫ್ ಯಾನೆ ಅಲಿ ಮುನ್ನಾ ಬಂಧನ – ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ

ಮಂಗಳೂರು(ಉಳ್ಳಾಲ): ಭೂಗತ ಪಾತಕಿ ರವಿ ಪೂಜಾರಿಯ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ.

ನಟೋರಿಯಸ್ ಶಾರ್ಪ್ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಭೂಗತ ಪಾತಕಿ ರವಿ ಪೂಜಾರಿಯ ಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದು, ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದ. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

LEAVE A REPLY

Please enter your comment!
Please enter your name here