ವನ್ಯಜೀವಿ ಉತ್ಪನ್ನಗಳನ್ನು ಸರಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಬಗ್ಗೆ ಚಿಂತನೆ-ಸಚಿವ ಈಶ್ವರ ಖಂಡ್ರೆ

ಮಂಗಳೂರು(ಬೆಂಗಳೂರು): ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಸಚಿವರು ವನ್ಯಜೀವಿಗಳ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಡೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003 ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಇನ್ನೂ ಅನೇಕರು ದೃಡೀಕರಣ ಮತ್ತು ಪ್ರಮಾಣ ಪತ್ರ ಪಡೆಯದೇ ಇರುವ ಕಾರಣ ಕಾನೂನಿನ ಅರಿವಿಲ್ಲದಶ್ರೀ ಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ, ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಎಲ್ಲಾ ಚಿನ್ನಾಭರಣ ಮಳಿಗೆಗಳಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ ಇದು ಶಿಕ್ಷಾರ್ಹ ಅಪರಾಧ ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು. ಅರಣ್ಯ ಇಲಾಖೆಗೆ 1926 ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆಮಾಡಿ ದೂರು ದಾಖಲಿಸಲು ಮತ್ತು ಅರಣ್ಯ ಇಲಾಖೆಗೆಗ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here