ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ

ಮಂಗಳೂರು(ಬೆಳ್ತಂಗಡಿ): ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೌಷಾದ್ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ‌ ಬಹುಮಾನ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ 23 ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಎನ್.ಐ.ಎ ಅಧಿಕಾರಿಗಳು ಪಡಂಗಡಿಯಲ್ಲಿರುವ ನೌಷಾದ್‌ ಮನೆಗೆ ದಾಳಿ ನಡೆಸಿದ್ದರು. ಆದರೆ ಈ ಪ್ರಕರಣ ನಡೆದ ಬಳಿಕ ನೌಷದ್ ನಾಪತ್ತೆಯಾಗಿದ್ದಾನೆ. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ತೆರಳಿದ್ದರು. ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷಾದ್ ಬಗ್ಗೆ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮತ್ತು ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಮಾಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here