ಮಂಗಳೂರು(ಉಡುಪಿ): ʼಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ.ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದ್ದು ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.
ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ನುಡಿದರು. ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹೇರಿ ಶ್ರಮಿಸಿದ್ದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಹೆಸರನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದಾಗ ಸಭೆಯು ಕರತಾಡನದೊಂದಿಗೆ ಹರ್ಷೋದ್ಘಾರ ವ್ಯಕ್ತಪಡಿಸಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
Excellent unbaised News coverage. Great work