ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ಮಂಗಳೂರು(ಹೊಸದಿಲ್ಲಿ): ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಬಿಡುಗಡೆಗೊಳಿಸಿದೆ.

ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಿ.ಟಿ.ಶ್ರೀನಿವಾಸ್ ಮತ್ತು ಈಶಾನ್ಯ ಪದವೀಧರರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಡಾ.ಚಂದ್ರಶೇಖರ್ ಬಿ. ಪಾಟಿಲ್ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here