ಎರ್ನಾಕುಲಂನ ಯಾಹೋವಾ ಸಮಾವೇಶದಲ್ಲಿ ಭೀಕರ ಸ್ಪೋಟ – ಒಂದು ಸಾವು , 23ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಗಳೂರು(ಎರ್ನಾಕುಲಂ): ಎರ್ನಾಕುಲಂನ ಕಳಮಶೇರಿ ಯಲ್ಲಿರುವ ಕನ್ವೆನ್ಷನ್ ಸೆಂಟರ್‌ನಲ್ಲಿ ಕ್ರೈಸ್ತ ಪಂಗಡದವರ ಯಾಹೋವಾ ಸಾಕ್ಷಿ ಸಮಾವೇಶದಲ್ಲಿ ನಡೆದ ಭೀಕರ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, 23 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಪ್ರಾರ್ಥನಾ ಸಭೆ ನಡೆಯುತ್ತಿದ್ದ, ಸಭಾಂಗಣದಲ್ಲಿ ಎಲ್ಲರೂ ಕಣ್ಣುಮುಚ್ಚಿ ಪ್ರಾರ್ಥನೆ ಮಾಡುತ್ತಿರುವಾಗ ಸಭಾಂಗಣದ ಮುಂಭಾಗದಲ್ಲಿ ಸ್ಫೋಟ ನಡೆದಿದೆ. ಪ್ರಾರ್ಥನೆಯ ವೇಳೆ ಭಾರೀ ಸ್ಫೋಟದ ಸದ್ದು ಕೇಳಿ ಬೆಂಕಿ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿ ಚದುರಿ ಓಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ತೀವ್ರ ಸುಟ್ಟಗಾಯಗಳಾದ ಜನರನ್ನು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಆರೋಗ್ಯ ಸಚಿವರು ಎರ್ನಾಕುಲಂನಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ಸಿದ್ಧವಾಗಿರುವಂತೆ ಸೂಚನೆ ನೀಡಿದ್ದು, ರಜೆಯಲ್ಲಿರುವ ಎಲ್ಲಾ ವೈದ್ಯರು ಮತ್ತು ದಾದಿಯರು ಕೆಲಸಕ್ಕೆ ಮರಳಲು ಸೂಚಿಸಲಾಗಿದೆ.

ಕಳೆದೆರಡು ದಿನಗಳಿಂದ ಕನ್ವೆನ್ಷನ್ ಸೆಂಟರ್‌ನಲ್ಲಿ ಸಭೆಗಳು ಮತ್ತು ಪ್ರಾರ್ಥನೆಗಳು ನಡೆಯುತ್ತಿವೆ. ಇಂದು ಕೊನೆಯ ದಿನವಾಗಿದ್ದು, ಬೆಳಗಿನ ಪ್ರಾರ್ಥನೆಯ ಬಳಿಕ ಸ್ಫೋಟ ಸಂಭವಿಸಿದೆ. ಒಂದು ಮಗು ಸೇರಿದಂತೆ ಏಳು ಮಂದಿಯನ್ನು ಐಸಿಯುಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಒಂಬತ್ತು ಮಂದಿಯನ್ನು ಕಾಕ್ಕನಾಡಿನ ಸನ್‌ರೈಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ಸ್ ತಂಡ ಮತ್ತು ಎನ್‌ಐಎ ತಂಡ ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಯುತ್ತಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

 

LEAVE A REPLY

Please enter your comment!
Please enter your name here