ಮಂಗಳೂರು(ಬೆಂಗಳೂರು): ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.