ಮಂಗಳೂರು: 68ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ʼಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023ʼ ಮೆರವಣಿಗೆಯಲ್ಲಿ 120ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಸುಧೀರ್ ಕಣ್ಣೂರು, ಶಾಸಕ ವೇದವ್ಯಾಯ ಕಾಮತ್, ದ.ಕ.ಜಿಲ್ಲಾಧಿಕಾರಿ ಮುಳ್ಳೈಮುಹಿಲನ್, ಪೋಲಿಸ್ ಆಯುಕ್ತ ಅನುಪಮ್ ಅಗರ್ವಾಲ್ ಉಪಸ್ಥಿತರಿದ್ದರು.
ಡ್ರಗ್ ಮುಕ್ತ ವಿಷಯಾಧರಿತ ರೀಲ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಾಕಥಾನ್ ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ನವಭಾರತ ವೃತ್ತ, ಪಿವಿಎಸ್, ಲಾಲ್‌ಭಾಗ್, ಲೇಡಿಹಿಲ್, ನಾರಾಯಣ ಗುರು ವೃತ್ತ ಮುಖಾಂತರ ಮಂಗಳ ಕ್ರೀಡಾಂಗಣದವರೆಗೆ ಸಾಗಿತು.