ಮೋದಿಗೆ ಗಿಫ್ಟ್‌ ನೀಡಿದ ಕಾಫಿನಾಡಿನ ಅಂಧ ಕ್ರೀಡಾಪಟು ರಕ್ಷಿತಾ ರಾಜು

ಮಂಗಳೂರು(ನವದೆಹಲಿ): ಚಿಕ್ಕಮಗಳೂರಿನ ಅಂಧ ಕ್ರೀಡಾಪಟು ರಕ್ಷಿತಾ ರಾಜು ಅವರು ಪ್ರಧಾನಿ ಮೋದಿ ಅವರಿಗೆ ಗಿಫ್ಟ್​ ನೀಡಿದ್ದಾರೆ.

ದೆಹಲಿಯಲ್ಲಿ ಪ್ಯಾರಾ ಗೇಮ್ಸ್​​ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ, ರಕ್ಷಿತಾ ರಾಜು ಪ್ರಧಾನಿ ಮೋದಿಗೆ ಮಹತ್ವದ ಉಡುಗೊರೆಯನ್ನು ನೀಡಿದ್ದಾರೆ. ಕಳೆದ ವರ್ಷ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ 5ನೇ ಸ್ಥಾನವನ್ನು ರಕ್ಷಿತಾ ಪಡೆದುಕೊಂಡಿದ್ದರು. ಅಂಧ ಯುವತಿಯಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಖುಷಿ ಪಟ್ಟು ಪ್ಯಾರಾ ಒಲಿಂಪಿಕ್ಸ್‌ನಲ್ಲೂ ಚಿನ್ನ ಗೆಲ್ಲುವಂತೆ ಹಾರೈಸಿದ್ದಾರೆ.

ಮೂಡಿಗೆರೆ ತಾಲೂಕಿನ ಗುಡ್ನಳ್ಳಿ ಸಮೀಪದ ಅಂಧ ಯುವತಿ ರಕ್ಷಿತಾ ರಾಜು ಅವರು, ಕಳೆದ ತಿಂಗಳು ಚೀನಾದ ಹಾಂಗ್​ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ 1500 ಮೀಟರ್ ಓಟವನ್ನ 5.21 ಸೆಕೆಂಡ್​ಗೆ ಓಡುವ ಮೂಲಕ ಚಿನ್ನದ ಸಾಧನೆ ಮಾಡಿದ್ದರು.

LEAVE A REPLY

Please enter your comment!
Please enter your name here