ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ಉಚಿತ ಹೃದಯ ಸಂಬಂಧಿ ವೈದ್ಯಕೀಯ ಚಿಕಿತ್ಸೆ ತಪಾಸಣಾ ಸೌಲಭ್ಯ-ಮಹತ್ವದ ಯೋಜನೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ

ಮಂಗಳೂರು(ಬೆಂಗಳೂರು): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಲ್ಲಾ ಸಿಬ್ಬಂದಿಗಳಿಗೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು 5 ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

‘ಆರೋಗ್ಯವಂತ ನೌಕರರೇ ಸಂಸ್ಥೆಯ ಆಸ್ತಿ’ ಎಂದು ಪರಿಗಣಿಸಿದ್ದು, ನಿಗಮದಲ್ಲಿ ಒಟ್ಟು 34ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆ ಪೈಕಿ 24,686 ಚಾಲಕ ಮತ್ತು ನಿರ್ವಾಹಕರುಗಳಾಗಿರುತ್ತಾರೆ. ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ/ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ. ಅದರಲ್ಲೂ, 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ.

ಈ ಸಂಬಂಧ, ನಿಗಮದ ಸಿಬ್ಬಂದಿಗೆ ಹೃದಯ ಸಂಬಂಧಿಸಿದ ನಿರ್ಧಿಷ್ಟ ಪರೀಕ್ಷೆಗೆ ಒಳಪಡಿಸುವ ಅವಶ್ಯಕತೆ ಮನಗಂಡು, ನೌಕರರಲ್ಲಿ ಜಾಗೃತಿ/ಅರಿವು ಮೂಡಿಸಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಅನುವಾಗುವ ಉದ್ದೇಶದಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿ, ಮುಂದಿನ 5 ವರ್ಷಗಳ ಅವಧಿಯ ಒಡಂಬಡಿಕೆ ಮಾಡಿಕೊಳ್ಳಲಾಯಿತು.

 

LEAVE A REPLY

Please enter your comment!
Please enter your name here