ಪಡುಬಿದ್ರೆಯಲ್ಲಿ ರಸ್ತೆ ಅಪಘಾತ-ಹಿಂಬದಿಯಿಂದ ಬಸ್ಸಿಗೆ ಬೈಕ್‌ ಡಿಕ್ಕಿ- ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು

ಮಂಗಳೂರು(ಪಡುಬಿದ್ರೆ): ಟ್ಯಾಂಕರ್ ಹರಿದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ನ.3ರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುವ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ವೇಳೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

LEAVE A REPLY

Please enter your comment!
Please enter your name here