



ಮಂಗಳೂರು(ಕಾಸರಗೋಡು): ಸ್ಕೂಟರ್–ಜೀಪು ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ.







ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ವಿದ್ಯಾರ್ಥಿ. ಈತ ಉಪ್ಪಳ ತಹಾನಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಮಸೀದಿಯಿಂದ ಮರಳುತ್ತಿದ್ದಾಗ ಮನೆ ಸಮೀಪವೇ ಈ ಅಪಘಾತ ನಡೆದಿದೆ. ಮುಂಭಾಗದಲ್ಲಿ ತೆರಳುತ್ತಿದ್ದ ಜೀಪು ತಿರುವೊಂದರಲ್ಲಿ ಏಕಾಏಕಿ ಬ್ರೇಕ್ ಹಾಕಿದೆ. ಆಗ ಹಿಂಭಾಗದಲ್ಲಿ ಬರುತ್ತಿದ್ದ ಸ್ಕೂಟರ್ ಜೀಪಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಇಫ್ರಾಝ್ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.















