ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ ಚಂದ್ರೇಗೌಡ ನಿಧನ

ಮಂಗಳೂರು(ಚಿಕ್ಕಮಗಳೂರು): ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ನ.6ರ ತಡರಾತ್ರಿ ಮೂಡಿಗೆರೆಯ ದಾರದಹಳ್ಳಿಯ ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

1936 ಆಗಸ್ಟ್ 26 ರಂದು ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ದಂಪತಿಯ ಪುತ್ರನಾಗಿ ಜನಿಸಿದ್ದ ಚಂದ್ರೇಗೌಡ ಆಪ್ತ ವಲಯದಲ್ಲಿ ಡಿಬಿಸಿ ಎಂದೇ ಜನಾನುರಾಗಿಯಾಗಿದ್ದರು. 1971ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಅವರು, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗುವ ಮೂಲಕ ನಾಲ್ಕೂ ಸದನಗಳಲ್ಲಿ ಸದಸ್ಯರಾಗಿದ್ದರು. 2014ರ ಬಳಿಕ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ಅವರು, ದಾರದಹಳ್ಳಿಯ ತಮ್ಮ ‘ಪೂರ್ಣಚಂದ್ರ’ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.ಮೃತರು ಪತ್ನಿ ಪೂರ್ಣಿಮಾ ಹಾಗೂ ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹಿರಿಯ ರಾಜಕೀಯ ನಾಯಕನ ಅಗಲಿಕೆಗೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

LEAVE A REPLY

Please enter your comment!
Please enter your name here