ಶೀಘ್ರದಲ್ಲೇ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು – ಎಕ್ಸ್‌ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಮಾಹಿತಿ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದು ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

https://x.com/nalinkateel/status/1721924539087483263?s=20

LEAVE A REPLY

Please enter your comment!
Please enter your name here