ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ‌ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು(ಬೆಂಗಳೂರು): ರಾಜ್ಯ ರಾಜಧಾನಿ ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ.

 

 

LEAVE A REPLY

Please enter your comment!
Please enter your name here