ಜಲ್ಲಿ ಸಾಗಾಟದ ಲಾರಿ ಕಾರಿಗೆ ಡಿಕ್ಕಿ-ಚಾಲಕ ಅಪಾಯದಿಂದ ಪಾರು

ಮಂಗಳೂರು(ಬಂಟ್ವಾಳ):ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಜಲ್ಲಿ ಸಾಗಿಸುವ ಲಾರಿಯೊಂದು ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಘಟನೆ ನ.9ರ ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಮೂಲಕ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರು ಚಲಾಯಿಸುತ್ತಿದ್ದ ಕೃಷ್ಣ ಅರಸ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here