ಮಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಖಾಸಗಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ(20) ಎಂದು ಗುರುತಿಸಲಾಗಿದೆ. ನಸುಕಿನ ವೇಳೆ ಮೂರು ಗಂಟೆ ವೇಳೆಗೆ ಈಕೆ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.