ಕಂದಕಕ್ಕೆ ಉರುಳಿದ ಬಸ್ಸ್-36ಮಂದಿ ಮೃತ್ಯು-ಜಮ್ಮು ಕಾಶ್ಮೀರದಲ್ಲಿ ನಡೆದ ಘಟನೆ

ಮಂಗಳೂರು(ದೋಡಾ): ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಸಾವು ನೋವಾದ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಬಸ್‌ನಲ್ಲಿ ಒಟ್ಟು 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು.ಈ ಧಾರುಣ ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

LEAVE A REPLY

Please enter your comment!
Please enter your name here