ಮಂಗಳೂರು(ಬೆಂಗಳೂರು): ಎರಡನೇ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಜಾಮೀನು ರಹಿತ ಬಂಧನದ ವಾರಂಟ್‌ಗೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಬಂಧನದ ವಿರುದ್ದ ತಡೆ ನೀಡಿ ಆದೇಶ ಹೊರಡಿಸಿದೆ. ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ. ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.