ಸ್ನೇಹಿತರೊಂದಿಗೆ ನದಿಗೆ ಸ್ನಾನಕ್ಕೆ ಹೋದ ಯುವಕ ಶಾಕಿರ್-ಕಾಲುಜಾರಿ ಆಯತಪ್ಪಿ ನೀರಿಗೆ ಬಿದ್ದು ಮೃತ್ಯು

ಮಂಗಳೂರು(ಸುರತ್ಕಲ್): ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ನ.20ರ ಸಂಜೆ ನಡೆದಿದೆ.

ಮೃತರನ್ನು ಮೂಲತಃ ಬಜ್ಪೆ ನಿವಾಸಿಯಾಗಿದ್ದು, ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌ (30) ಎಂದು ಗುರುತಿಸಲಾಗಿದೆ. ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದು, ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು.  ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲೆತ್ತಿದ್ದಾರೆ. ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here