ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ-ಝಮೀರ್‌ ಅವರನ್ನು ರಸ್ತೆಯಲ್ಲಿ ಓಡಾಡೋಕೆ ಬಿಟ್ಟಿದ್ದು ಅಪರಾಧ-ಅಧಿವೇಶನದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೆ ನಾವು ನೋಡಿಕೊಳ್ಳುತ್ತೇವೆ-ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

ಮಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಸರಕಾರದಿಂದ ಹಣ ಬಿಡುಗಡೆಯಾಗುತ್ತಿಲ್ಲ. ಮತ ಕೊಟ್ಟ ಜನರು ಪಶ್ಚಾತಾಪ ಪಡುತ್ತಿದ್ದಾರೆ. ಇದು ರೈತ ವಿರೋಧಿ, ಬಡವರ ವಿರೋಧಿ, ದಲಿತ ವಿರೋಧಿ ಸರಕಾರ. ಇಡೀ ದೇಶದಲ್ಲಿ ಜನಪ್ರಿಯತೆ ಕಳೆದುಕೊಂಡ ಸರಕಾರ ಅದು ಕಾಂಗ್ರೆಸ್‌ ಸರಕಾರ. ಬೆಳಗಾವಿ ಅಧಿವೇಶನ ತಯಾರಿ ನಡೆಯುತ್ತಿದೆ. ಈ ಎಲ್ಲ ವಿಚಾರವಾಗಿ ಮುಂದಿನ ಅಧಿವೇಶನದಲ್ಲಿ ಸರಕಾರದ ಕಿವಿ ಹಿಂಡುವ ಕೆಲಸ ಬಿಜೆಪಿ ಮಾಡಲಿದೆ ಎಂದು ವಿಜಯೇಂದ್ರ ಹೇಳಿದರು.

ಬಿಜೆಪಿಯಿಂದ ಯಾರು ಹೊರ ಹೋಗುವುದಿಲ್ಲ. ಬಿಜೆಪಿ ತೊರೆದು ಹೋಗಿರುವವರನ್ನು ಮರಳಿ ಪಕ್ಷ ಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದ ಹೇಳಿದ ವಿಜಯೇಂದ್ರ, ಜಾತಿಗಣತಿಗೆ ಬಿಜೆಪಿಯ ವಿರೋಧವಿಲ್ಲ. ಈ ವಿಚಾರದಲ್ಲಿ ರಾಜಕೀಯ ಲಾಭ ಪಡೆಯುವ ದುರುದ್ದೇಶಕ್ಕಷ್ಟೇ ಬಿಜೆಪಿಯ ವಿರೋಧ ವಿದೆ. ಈ ವರದಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ವಿಳಂಬ ಮಾಡಿದೆ ಎಂದು ಆರೋಪಿಸಿದ್ದಾರೆ. ಹಿಂಗಾರು ಮುಂಗಾರು ವಿಫಲವಾಗಿದ್ದು ರಾಜ್ಯ ಸರಕಾರದ ಕಣ್ಣಮುಚ್ಚಾಲೆಯಿಂದ ರೈತರು ಪರದಾಡುತ್ತಿದ್ದಾರೆ. ಸರಕಾರ ಮೋಜು ಮಸ್ತಿಯಲ್ಲಿ ತೊಡಗಿದೆ. ಹೊಸ ಕಾರು ಖರೀದಿ ಬರಗಾಲದಲ್ಲಿ ಇವರಿಗೆ ಆದ್ಯತೆಯಾಗಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಸಚಿವ ಝಮಿರ್ ಅಹ್ಮದ್ ಖಾನ್ ಸ್ವೀಕರ್ ಸ್ಥಾನದ ಗೌರವಕ್ಕೆ ಚ್ಯುತಿಯಾಗುವಂತೆ ಮಾತನಾಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಅವರ ರಾಜೀನಾಮೆ ಪಡೆಯಬೇಕು. ಸಂವಿಧಾನ ಬದ್ದ ಪೀಠಕ್ಕೆ ಜಾತಿ ಧರ್ಮದ ಬಣ್ಣವನ್ನು ಹಚ್ಚಿದ್ದಾರೆ. ಮುಂದಿನ ಅಧಿವೇಶನದಲ್ಲಿ ಝಮೀರ್‌ ಹೇಗೆ ಪಾಲ್ಗೊಳ್ಳುತ್ತಾರೆ ಎಂದು ನಾವು ನೋಡಿಕೊಳ್ಳುತ್ತೇವೆ ಎಂದ ವಿಜಯೇಂದ್ರ ಇದು ದಲಿತ ವಿರೋಧಿ ಸರಕಾರ ಅನ್ನೋದನ್ನು ಸಾಬೀತು ಪಡಿಸಿದ್ದೀರಿ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜಯ ಗಳಿಸುವುದು ಬಿಜೆಪಿಯ ಗುರಿಯಾಗಿದೆ ಎಂದು ವಿಜಯೇಂದ್ರ ನುಡಿದರು.

ರಾಜ್ಯಾಧ್ಯಕ್ಷರ ನೇಮಕ ಆಗಿಲ್ಲ, ಸಾಕಷ್ಟು ಪೈಪೋಟಿ ಇದೆ, ಭಿನ್ನಮತ ಇದೆ ಎನ್ನುವ ಚರ್ಚೆಯ ನಡುವೆ ರಾಷ್ಟ್ರೀಯ ನಾಯಕರು ದೊಡ್ಡ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಹಿಂದಿನ ಯಶಸ್ವಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಂತೆ ನನ್ನ ಜವಾಬ್ದಾರಿ, ಕರ್ತವ್ಯ ನಿರ್ವಹಿಸುತ್ತೇನೆ. ಭಿನ್ನಾಭಿಪ್ರಾಯ ಮರೆತು ಒಂದಾಗಿ ಹೋಗುತ್ತೇವೆ

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ ಪ್ರತಾಪ್ ಸಿಂಹ ನಾಯಕ್, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here