ಅಕ್ರಮವಾಗಿ ಮರದ ದಿಮ್ಮಿಗಳ ಸಾಗಾಟ-ಅರಣ್ಯಾಧಿಕಾರಿಗಳಿಂದ ದಾಳಿ

ಮಂಗಳೂರು(ಬಂಟ್ವಾಳ): ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ವಶಪಡಿಸಿಕೊಂಡ ವಾಹನ ಮತ್ತು ಸೊತ್ತಿನ ಒಟ್ಟು ಮೌಲ್ಯ 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.ನ. 22ರಂದು ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕು ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ದಾಳಿಯಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಪಿ, ಉಪವಲಯ ಅರಣ್ಯಾಧಿಕಾರಿ ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ, ಶೋಬಿತ್ ಸ್ಮಿತಾ ಮತ್ತು ರೇಖಾ ಸಚಿನ್, ಅರಣ್ಯ ವೀಕ್ಷಕ ಭಾಸ್ಕರ ಹಾಗೂ ಇಲಾಖಾ ವಾಹನ ಚಾಲಕ ಜಯರಾಮ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here