ಹುತಾತ್ಮ ಯೋಧ ಪ್ರಾಂಜಲ್ ಗೆ ಅಂತಿಮ ನಮನ ಸಲ್ಲಿಸಿದ ಸಿಎಂ-ಕುಟುಂಬಕ್ಕೆ ಸಾಂತ್ವಾನ ಹೇಳಿ, 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಮಂಗಳೂರು(ಬೆಂಗಳೂರು): ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನ.22ರಂದು ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರಾವಳಿ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಇಂಧನ ಸಚಿವ ಕೆ.ಜೆ.ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಯೋಧ ಪ್ರಾಂಜಲ್ ಕುಟುಂಬದ ಸದಸ್ಯರು, ಸೇನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ” ಎಂದು ಹೇಳಿದ ಸಿದ್ದರಾಮಯ್ಯ, ಪ್ರಾಂಜಲ್ ಕುಟುಂಬಕ್ಕೆ 50ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

 

 

 

LEAVE A REPLY

Please enter your comment!
Please enter your name here