ಜಾತಿ ಗಣತಿ ವರದಿಯ ಪರಿಗಣನೆ-ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ವಿಸ್ತರಣೆ

ಮಂಗಳೂರು(ಬೆಂಗಳೂರು): ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮೂಲಗಳ ಪ್ರಕಾರ ಜಯಪ್ರಕಾಶ್ ಹೆಗ್ಡೆ ಅವರ ಸೇವಾವಧಿ ನ.24ರಂದು ಮುಕ್ತಾಯಗೊಂಡಿದ್ದು ಅಧಿಕಾರಾವಧಿಯನ್ನು ಮತ್ತೆ 2024 ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಮೂಲಗಳ ಪ್ರಕಾರ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಈ ಸಂಬಂಧ ಮೌಖಿಕವಾಗಿ ಮುಂದುವರಿಯುಂತೆ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಸೂಚಿಸಿದ್ದಾರೆ. ಆದರೆ, ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಣಯ ಕೈಗೊಂಡಿದೆ. ಈ ಮೂಲಕ ಡಿಸೆಂಬರ್‌ ಒಳಗೆ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆ.

LEAVE A REPLY

Please enter your comment!
Please enter your name here