ಆಂತರಿಕ ಅಂಕಗಳ ಬಗ್ಗೆ ಚರ್ಚಿಸುವ ನೆಪ – ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಪ್ರಾಂಶುಪಾಲ ವಿರುದ್ಧ ದೂರು ದಾಖಲು

ಮಂಗಳೂರು(ಬೆಂಗಳೂರು): ನಗರದ ಕಾಲೇಜು ಪ್ರಾಂಶುಪಾಲರೊಬ್ಬರು ತಮ್ಮ ಕಚೇರಿಯ ಕೊಠಡಿಯಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯನ್ನು ಮಾತುಕತೆಗೆಂದು ತಮ್ಮ ಚೇಂಬರ್‌ಗೆ ಕರೆಸಿಕೊಂಡಿದ್ದ ಪ್ರಾಂಶುಪಾಲರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜಿನ 40 ವರ್ಷದ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ವೈಯಾಲಿಕಾವಲ್ ಪೊಲೀಸರಿಗೆ ನೀಡಿದ ದೂರಿನ ಅನ್ವಯ ಕೇಸ್ ದಾಖಲಾಗಿದ್ದು, ಪೊಲೀಸರು ಎರಡೂ ಕಡೆಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆಂತರಿಕ ಅಂಕಗಳ ಬಗ್ಗೆ ಚರ್ಚಿಸುವ ನೆಪದಲ್ಲಿ ಪ್ರಾಂಶುಪಾಲರು ಬಾಲಕಿಯನ್ನು ತಮ್ಮ ಚೇಂಬರ್‌ಗೆ ಕರೆಸಿಕೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯನ್ನು ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

 

 

LEAVE A REPLY

Please enter your comment!
Please enter your name here