4ನೇ ಕ್ಲಾಸ್ ವಿದ್ಯಾರ್ಥಿಗಳ ಜಗಳ-ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು

ಮಂಗಳೂರು(ಭೋಪಾಲ್): 4ನೇ ತರಗತಿ ವಿದ್ಯಾರ್ಥಿಗೆ ಆತನದ್ದೇ ಕ್ಲಾಸಿನ ಮೂವರು ಸಹಪಾಠಿಗಳು ಕೈವಾರದಿಂದ 108 ಬಾರಿ ಚುಚ್ಚಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ನ. 24ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಒಬ್ಬ ವಿದ್ಯಾರ್ಥಿಯ ಮೇಲೆ ಇತರ ಮೂವರು ಸಹಪಾಠಿಗಳು ಕೈವಾರದಿಂದ 108 ಬಾರಿ ಹಲ್ಲೆ ನಡೆಸಿರುವುದಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಾಯಗೊಂಡ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಎಲ್ಲಾ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಈ ಬಗ್ಗೆ ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here