ಪಂಚ ರಾಜ್ಯಗಳ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ – ಡಿ.3ರಂದು ಮತ ಎಣಿಕೆ

ಮಂಗಳೂರು (ಬೆಂಗಳೂರು): 2024ರ ಮಹಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶವು ಡಿ.3ರ ಭಾನುವಾರ ಪ್ರಕಟವಾಗಲಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಹಾಗೂ ಮಿಜೋರಾಂ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಸುಮಾರು 16.1 ಕೋಟಿ ಪ್ರಜೆಗಳು ಮತ ಚಲಾಯಿಸಿದ್ದರು. ಇವುಗಳಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣಗಳ ವಿಧಾನಸಭೆ ಅವಧಿಯು 2024ರ ಜನವರಿ ತಿಂಗಳಲ್ಲಿ ಕೊನೆಯಾಗಲಿದ್ದರೆ, ಮಿಜೋರಾಂ ವಿಧಾನಸಭೆಯ ಅವಧಿ ಇದೇ ತಿಂಗಳು ಕೊನೆಯಾಗುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಹಾಗೂ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆಯು 2023 ಡಿಸೆಂಬರ್ 3ರ ಭಾನುವಾರ ಬೆಳಿಗ್ಗೆ ಆರಂಭವಾಗಲಿದ್ದು, ಸಂಜೆಯ ವೇಳೆಗೆ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here