ಮಂಗಳೂರು(ಮೇದಕ್): ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪಿಸಿ 7 ಎಂಕೆ-2 ದಿಂಡಿಗಲ್ ನಿಂದ ಟೇಕ್ ಆಫ್ ಆಗಿದ್ದು, ತೂಪ್ರಾನ್ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಡಿ.4ರ ಬೆಳಗ್ಗೆ ಪತನಗೊಂಡಿದೆ.
ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿದ್ದಾರೆ. ಆದರೆ ತರಬೇತಿ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.