ಮಿಚುಂಗ್ ಚಂಡಮಾರುತ ಎಫೆಕ್ಟ್-ತಮಿಳುನಾಡಲ್ಲಿ ಭಾರೀ‌ ಮಳೆ- ಶಾಲೆ-ಕಾಲೇಜುಗಳಿಗೆ ರಜೆ

ಮಂಗಳೂರು(ಚೆನ್ನೈ): ಬಂಗಾಳಕೊಲ್ಲಿಯಲ್ಲಿ ಮಿಚುಂಗ್ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಡಿ.5ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಸೋಮವಾರ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಬೀಚ್‌ಗಳಿಗೆ ಜನರ ಭೇಟಿಯನ್ನು ಗ್ರೇಟರ್ ಚೆನ್ನೈ ಪೊಲೀಸರು ನಿರ್ಬಂಧಿಸಿದ್ದಾರೆ. ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆ ರದ್ದುಗೊಳಿಸಲಾಗಿದೆ. ಚಂಡಮಾರುತ ಪರಿಣಾಮವಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here