ಮಂಗಳೂರು(ಜಕಾರ್ತ): ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಸುಮಾತ್ರಾದಲ್ಲಿ ಡಿ.3ರಂದು ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75ರಷ್ಡು ಜನರಿದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 14 ಜನರನ್ನು ರಕ್ಷಿಸಿದೆ. 11 ಜನರು ಶವವಾಗಿ ಪತ್ತೆಯಾಗಿದ್ದಾರೆ ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ. ಇನ್ನು ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.