ಆದಾಯಕ್ಕೂ ಮಿಕ್ಕಿದ ಆಸ್ತಿ, ಸಂಪತ್ತು-ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ-ದಾಖಲೆಗಳ ಪರಿಶೀಲನೆ

ಮಂಗಳೂರು(ಬೆಂಗಳೂರು): ಡಿ.5ರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ 3 ಕಡೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಮೈಸೂರಿನ ನಂಜನಗೂಡು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆಗೆ ದಾಳಿ ಮಾಡಿದ್ದಾರೆ. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನೂ ಹಲವೆಡೆ ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

LEAVE A REPLY

Please enter your comment!
Please enter your name here