ಮಂಗಳೂರು(ಉಳ್ಳಾಲ): ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್ಎಸ್ಡಿ ಸ್ಟ್ಯಾಂಪ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 132 ಗ್ರಾಂ ತೂಕದ ಮೆಥಾಂಫೆಟಮೈನ್ ಮತ್ತು 250 LSD ಸ್ಟ್ಯಾಂಪ್ ಹಾಗೂ ನಗದು ಹಣ ರೂ.3,70,050/- ಹಾಗೂ ಸ್ವಿಪ್ಟ್ ಕಾರು ಸೇರಿ ಒಟ್ಟು ರೂ.14,01,050-00 ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ.ಎನ್.ನಾಯಕ್ ಮಂಗಳೂರು ದಕ್ಷಿಣ ಉಪವಿಭಾಗರವರ ನೇತೃತ್ವದಲ್ಲಿ Anti-Drug Team ಪಿಎಸ್ಐ ಪುನಿತ್ ಗಾಂವ್ಕರ್, ಉಳ್ಳಾಲ ಠಾಣಾ ಪಿಎಸ್ಐ, ಸಂತೋಷಕುಮಾರ್.ಡಿ. ಹಾಗೂ ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್, ಅಕ್ಬರ್ ಯಡ್ರಾಮಿ ರವರು ಭಾಗವಹಿಸಿದ್ದಾರೆ.