ಮಂಗಳೂರು: ಮೈಸೂರಿನ ಮಾನಸಗಂಗೋತ್ರಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಹೈದರಾಬಾದ್ ಮೂಲದ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಅಕ್ಷಜ್ (18) ಶವ ಪತ್ತೆಯಾಗಿದೆ.
ಮೃತ ಅಕ್ಷಜ್ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿಯಲಾಗಿದೆ. ಕೈಗಳನ್ನು ಕಟ್ಟಿ ಹಾಕಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಅಕ್ಷಯ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.