ಡಿಸ್ಟಿಲರಿ ಸಂಸ್ಥೆಗಳ ಮೇಲೆ ಐಟಿ ದಾಳಿ-200 ಕೋಟಿ ರೂ. ನಗದು ವಶ

ಮಂಗಳೂರು(ನವದೆಹಲಿ): ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ ಕಚೇರಿ ಮತ್ತು ಕಂಪನಿಗೆ ಸಂಪರ್ಕ ಹೊಂದಿದ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಸುಮಾರು 200 ಕೋಟಿಯಷ್ಟು ಹಣ ಜಪ್ತಿ ಮಾಡಿದೆ. ದಾಳಿ ವೇಳೆ ಭಾರೀ ಪ್ರಮಾಣದಲ್ಲಿ ನೋಟುಗಳು ಇದ್ದ ಕಾರಣ ನೋಟು ಎಣಿಸುವ ಯಂತ್ರಗಳು ಕೆಟ್ಟು ನಿಂತಿವೆ ಎಂದು ಐಟಿ ಮೂಲಗಳು ತಿಳಿಸಿವೆ.

ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಡಿ.6ರಂದು ಬಿಡಿಪಿಎಲ್ ಗೆ ಸೇರಿದ ಕೋಲ್ಕತ್ತಾ ಮತ್ತು ರಾಂಚಿಯಲ್ಲಿರುವ ಕಚೇರಿ ಸೇರಿದಂತೆ ಬೌಧ್, ಬೋಲಂಗಿರ್, ರಾಯ್‌ಗಢ ಮತ್ತು ಸಂಬಲ್‌ಪುರದಲ್ಲಿನ ಡಿಸ್ಟಿಲರಿಗೆ ಏಕಕಾಲದಲ್ಲಿ ದಾಳಿಗಳನ್ನು ನಡೆಸಲಾಗಿತ್ತು. ಸಂಸ್ಥೆಯ ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರ ನಿವಾಸಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಡಿಶಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಬಿಡಿಪಿಎಲ್‌ ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿದೆ. ದಾಳಿ ವೇಳೆ ಪತ್ತೆಯಾದ ನಿಖರ ಮೊತ್ತ ಇನ್ನೂ ಬಹಿರಂಗವಾಗಿಲ್ಲ.

 

LEAVE A REPLY

Please enter your comment!
Please enter your name here