ರಾಜ್ಯದ ಎಪಿಎಲ್-ಬಿಪಿಎಲ್ ಕುಟುಂಬಗಳಿಗೆ ಶುಭಸುದ್ದಿ – ಆರೋಗ್ಯ ಕಾರ್ಡ್ ಮೂಲಕ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಮಂಗಳೂರು(ಬೆಳಗಾವಿ): ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದಾರೆ. ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ. ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದ್ದು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ರಾಜ್ಯದ ಜನತೆಗೆ ತಲುಪಿಸಲು ಸರಕಾರ ಯೋಜನೆ ಹಾಕಿಕೊಂಡಿದೆ.

ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ ಎಪಿಎಲ್ ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

 

 

LEAVE A REPLY

Please enter your comment!
Please enter your name here