ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ‌ ನೀಡುವ ಆರ್ಟಿಕಲ್ 370 ರದ್ದು- ನಾಳೆ(ಡಿ. 11) ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್

ಮಂಗಳೂರು(ನವದೆಹಲಿ): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ನಾಳೆ(ಡಿ.11) ತೀರ್ಪು ಹೊರಬೀಳಲಿದೆ.

ಕೇಂದ್ರ ಸರಕಾರ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ರದ್ದು ಮಾಡುವ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿತ್ತು. ಕೋಲಾಹಲ ಸೃಷ್ಟಿಸಿದ ಈ ಘೋಷಣೆಯನ್ನು ಹಲವು ವಿಪಕ್ಷಗಳು ವಿರೋಧಿಸಿದ್ದವು. ಮತ್ತು ಕೇಂದ್ರ ಸರಕಾರದ ಈ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್‌ಕೌಲ್, ಸಂಜೀವ್ ಖನ್ನಾ, ಬಿ.ಆರ್. ಗವಾಯಿ ಹಾಗೂ ಸೂರ್ಯಕಾಂತ್ ನೇತೃತ್ವ ಪೀಠ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದು ನಾಳೆ ತೀರ್ಪು ಹೊರಬೀಳಲಿದೆ.

LEAVE A REPLY

Please enter your comment!
Please enter your name here