ಮಂಗಳೂರು: ರಾಜ್ಯದ ಗಡಿ ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆದ ಹೊತ್ತಲ್ಲೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದ್ದು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಕೇಂದ್ರದ ತನಿಖಾ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎದುರಿಸುತ್ತಿರುವ ಓರ್ವ ಸಚಿವರ ನೇತೃತ್ವದಲ್ಲಿ 50 ರಿಂದ 60 ಕಾಂಗ್ರೇಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.