ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ- ಪೊಲೀಸರಿಂದ ತನಿಖೆ

ಮಂಗಳೂರು(ಬೆಂಗಳೂರು):  ರಾಜ ಭವನಕ್ಕೆ ಬಾಂಬ್‌ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಡಿ.11ರ ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಬಾಂಬ್‌ ಸ್ಕ್ವಾಡ್‌ ಮತ್ತು ಡಾಗ್‌ ಸ್ಕ್ವಾಡ್‌ನೊಂದಿಗೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಪರಿಶೀಲನೆ ನಡೆಸಿದ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲವಾದರೂ ಹೈ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಯಾರು ಎಂಬ ವಿಚಾರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆದರಿಕೆ ಕರೆ ಬೆನ್ನಲ್ಲೇ ರಾಜಭವನದ ಬಳಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಪರಿಶೀಲನೆ ನಡೆಸಿ ಒಳಗಡೆ ಕಳುಹಿಸಲಾಗುತ್ತಿದೆ. ಇತ್ತೀಚೆಗಷ್ಟೇ ಇದೇ ರೀತಿ ಇಮೇಲ್‌ಗಳ ಮೂಲಕ ಬೆಂಗಳೂರಿನಾದ್ಯಂತ ಸುಮಾರು 44 ಶಾಲೆಗಳಿಗೆ ಅನಾಮಧೇಯ ಬಾಂಬ್ ಬೆದರಿಕೆ ಕರೆ ಬಂದಿತ್ತು. ಈ ಘಟನೆ ನಡೆದು 10 ದಿನಕ್ಕೆ ರಾಜಭವನಕ್ಕೆ ಬಾಂಬ್‌ ಇಡಲಾಗಿದೆ ಎಂಬ ಹುಸಿ ಕರೆ ಬಂದಿದ್ದು, ಕರೆ ಮಾಡುವ ಕಿಡಿಗೇಡಿಗಳನ್ನು ಪೊಲೀಸರು ಮಟ್ಟ ಹಾಕಿ ಬಂಧಿಸುವ ಮೂಲಕ ಇಂತಹ ಕೃತ್ಯಕ್ಕೆ ಪೂರ್ಣ ವಿರಾಮ ಹಾಕಬೇಕಾಗಿದೆ.

LEAVE A REPLY

Please enter your comment!
Please enter your name here